ಮೈಸೂರು: ದನ ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದ್ದು, ರೈತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿರುವುದಕ್ಕೆ ಆತಂಕ ಮನೆ ಮಾಡುತ್ತಿದೆ. ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ಗಣೇಶ(55) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಗಣೇಶ ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ ನಡೆಸಿದೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತದೇಹವನ್ನು ಅರ್ಧ ತಿಂದು ಹುಲಿ ಬಿಟ್ಟುಹೋಗಿದೆ.
ಕೂಡಲೇ ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯ ಶಾಸಕ ಜಿ.ಡಿ.ಹರೀಶ್ ಗೌಡ (GD Harish Gowda) ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.