Nitin Gadkari | ವಾಹನ ಸವಾರರಿಗೆ ಖುಷಿ ಸುದ್ದಿ
60 ಕಿ.ಮೀ. ವ್ಯಾಪ್ತಿಯೊಳಗಡೆ ಟೋಲ್ ತೆರಿಗೆ ಇಲ್ಲ
ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಹೇಳಿಕೆ
60 ಕಿ.ಮೀ ಅಂತರದಲ್ಲಿರೋ ಟೋಲ್ ಸಂಗ್ರಹ ಕೇಂದ್ರ ತೆರವು
60 ಕಿ.ಮೀ ಅಂತರದಲ್ಲಿ ಕೇವಲ ಒಂದು ಟೋಲ್ ಸಂಗ್ರಹ ಕೇಂದ್ರ
ನವದೆಹಲಿ : ವಾಹನ ಸವಾರರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿ ನೀಡಿದ್ದಾರೆ. ಇನ್ಮುಂದೆ 60 ಕಿ.ಮೀ. ವ್ಯಾಪ್ತಿಯೊಳಗೆ ಟೋಲ್ ತೆರಿಗೆ ಇರಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಸಚಿವರು, ಮುಂದಿನ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಲೋಮೀಟರ್ ಅಂತರದಲ್ಲಿರುವ ಎಲ್ಲಾ ಟೋಲ್ ಸಂಗ್ರಹ ಕೇಂದ್ರಗಳನ್ನು ಮುಚ್ಚಲಾಗುವುದು.
ಇನ್ಮುಂದೆ 60 ಕಿ.ಮೀ. ವ್ಯಾಪ್ತಿಯಲ್ಲಿ ಕೇವಲ ಒಂದು ಟೋಲ್ ಸಂಗ್ರಹವಿರುತ್ತದೆ ಎಂದು ತಿಳಿಸಿದ್ದಾರೆ.
2024ರ ವೇಳೆಗೆ ಭಾರತದ ರಸ್ತೆ ಜಾಲ ಮತ್ತು ಮೂಲಸೌಕರ್ಯ ವ್ಯವಸ್ಥೆ ಅತ್ಯಾಧುನಿಕವಾಗಿ ಮೇಲ್ದರ್ಜೆಗೆ ಏರಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ್ ಹಾಗೂ ಶಕ್ತಿಶಾಲಿ ಭಾರತ ನಿರ್ಮಾಣ ಪರಿಕಲ್ಪನೆಯಲ್ಲಿ ರಸ್ತೆ ಸಾರಿಗೆ ಮತ್ತು ಮೂಲಸೌಕರ್ಯ ವಲಯ ಮಹತ್ವದ ಪಾತ್ರ ನಿರ್ವಹಿಸಲಿವೆ ಎಂದರು.
ಇನ್ನೆರಡು ವರ್ಷಗಳಲ್ಲಿ ದೇಶದ ರಸ್ತೆ ಸಂಪರ್ಕ ಜಾಲ ಅಮೆರಿಕ ದೇಶದಂತಹ ಮುಂದುವರೆದ ರಾಷ್ಟ್ರಗಳಿಗೆ ಸಮನಾಗಲಿದೆ.
ಇದರಿಂದ ಸಾರಿಗೆ ಸಂಪರ್ಕ ಉತ್ತಮಗೊಳ್ಳುವುದರ ಜೊತೆಗೆ ಉದ್ಯೋಗಾವಕಾಶ ಸೃಷ್ಟಿಯಾಗಲಿದ್ದು, ಕೃಷಿ ಮತ್ತು ಪ್ರವಾಸೋದ್ಯಮ ವಲಯಗಳೂ ಅಭಿವೃದ್ಧಿಗೊಳ್ಳಲಿವೆ ಎಂದು ಸಚಿವರು ತಿಳಿಸಿದರು. A toll for 60km on national highways Nitin Gadkari