ರಾಜ್ಯದಲ್ಲಿ ಮುಂಗಾರು ಹಂಗಾಮ ಕ್ಷೀಣಿಸಿದೆ. ಮಳೆ ಸುರಿಯದ ಹಿನ್ನೆಲೆಯಲ್ಲಿ ತರಕಾರಿ ಬೆಲೆ ಗಗನಕ್ಕೆ ಏರಿಕೆಯಾಗಿದ್ದು, ಟೊಮೆಟೋ ಶತಕದ ಗಡಿ ದಾಟಿ ಸಾಗುತ್ತಿದೆ.
ಒಂದು ಕೆಜಿ ಟೊಮೆಟೋ 100 ರೂ.ನಿಂದ 120ರ ವರೆಗೆ ಮಾರಾಟವಾಗುತ್ತಿದೆ. ಒಂದು ಕೆಜಿ ಟೊಮೆಟೋಗೆ ಹಾಪ್ ಕಾಮ್ಸ್ ನಲ್ಲಿ110 ರೂ., ಆನ್ ಲೈನ್ ಶಾಪಿಂಗ್ ನಲ್ಲಿ 120 ರೂ. ಆಗಿದೆ. ಈ ಹಿನ್ನೆಲೆಯಲ್ಲ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಟೊಮೆಟೋ ಬೆಲೆ ಈಗ ಸೇಬು ಹಣ್ಣಿನ ಬೆಲೆಯಂತಾಗಿದೆ. ಚಿಕ್ಕಬಳ್ಳಾಪುರ, ದೊಡ್ಡಬಳ್ಳಪುರ, ಬೆಂಗಳೂರು, ಚಾಮರಾಜನಗರ, ಕೋಲಾರ ಭಾಗಗಳಲ್ಲಿ ಟೊಮೆಟೋ ಬೆಳೆ ನಾಶವಾಗಿದೆ. ಹೀಗಾಗಿ ದರದಲ್ಲಿ ಏರಿಕೆಯಾಗಿದ್ದು, ಜನರು ಬೇಸರ ವ್ಯಕ್ತಪಡಿಸುವಂತಾಗಿದೆ.
ಮೇ ತಿಂಗಳ ಮೂರನೇ ವಾರದಲ್ಲಿ ಬೆಂಗಳೂರಿನಲ್ಲಿ ಟೊಮೆಟೋ ದರವು ಪ್ರತಿ ಕೆಜಿಗೆ 40 ರೂ. ಆಗಿತ್ತು. ಆದರೆ, ಈಗ ದಿಢೀರ್ ಆಗಿ 120 ರೂ.ಗೆ ಹೆಚ್ಚಳವಾಗಿದೆ. ಇನ್ನುಳಿದ ತರಕಾರಿ ಬೆಲೆಯಲ್ಲಿ ಕೂಡ ಏರಿಕೆಯಾಗಿದ್ದು, ಕೇವಲ ಒಂದೇ ವಾರದಲ್ಲಿ ದುಪ್ಪಟ್ಟು ದರದಲ್ಲಿ ತರಕಾರಿ ಮಾರಾಟವಾಗುತ್ತಿವೆ.





![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)

![technologies-aerospace-defense-manufacturing-unit-devanahalli]](https://saakshatv.com/wp-content/uploads/2026/10/areo-350x247.png)
