ರಾಜ್ಯದಲ್ಲಿ ಹೊಸದಾಗಿ 16,436 ಪ್ರಕರಣಗಳು ಪತ್ತೆ Saaksha Tv
ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರುತ್ತಿದ್ದು ಗುರುವಾರ 16,436 ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ತಿಳಿಸಿದೆ.
ನಿನ್ನೆ ಆಸ್ಪತ್ರೆಯಿಂದ ಬಿಡುಗಡೆಯಾದವರು 44,819 ಜನರು, ಇದುವರೆಗೆ 36,72, 744 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 1,48,800 ಲಕ್ಷ ಸಕ್ರಿಯ ಪ್ರಕರಣಗಳಿವೆ. ನಿನ್ನೆ ರಾಜ್ಯದಲ್ಲಿ 60 ಜನರು ಸಾವನ್ನಪ್ಪಿದ್ದಾರೆ. ಈವರೆಗೆ ರಾಜ್ಯದಲ್ಲಿ 39,197 ಜನರು ಸಾವನ್ನಪ್ಪಿದ್ದಾರೆ. ಸಾವಿನ ಪ್ರಮಾಣವು ಶೇ 0.36ರಷ್ಟಿದ್ದು, ಪಾಸಿಟಿವಿಟಿ ಪ್ರಮಾಣವು ಶೇ 11.31 ರಷ್ಟಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗುರುವಾರ 6,640 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 14 ಜನ ಸೋಂಕಿತರು ಮೃತಪಟ್ಟಿದ್ದಾರೆ. ಮೈಸೂರು 706, ಶಿವಮೊಗ್ಗ 701, ತುಮಕೂರು 572, ಉತ್ತರ ಕನ್ನಡ 567, ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ 535 ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಿದೆ.








