ಪ್ರವಾಸಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಸಾವನ್ನಪ್ಪಿ, 11 ಜನ ಗಾಯಗೊಂಡಿರುವ ಘಟನೆ ನಡೆದಿದೆ.
ತಮಿಳುನಾಡಿನಿಂದ ಬಂದಿದ್ದ ಪ್ರವಾಸಿ ವಾಹನ ಆದಿಮಲಿ ಹತ್ತಿರ ಕಂದಕಕ್ಕೆ ಉರುಳಿದೆ. ಪರಿಣಾಮ 1 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಗಾಯಗೊಂಡ 11 ಜನರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ವಾಹನದಲ್ಲಿ 14 ಜನ ಪ್ರಯಾಣಿಸುತ್ತಿದ್ದರು.
ಅಪಘಾತ ಯಾವ ರೀತಿ ನಡೆಯಿತು ಎಂಬ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರವಾಸಿಗರು ತಮಿಳುನಾಡಿನ ಥೇಣಿಯಿಂದ ಆಗಮಿಸಿದ್ದರು ಎನ್ನಲಾಗಿದೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.