ಅಯೋಧ್ಯೆ : ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.
ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದ್ದು, ಸಕಲ ಸಿದ್ಧತೆ ನಡೆದಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆಗೆ ಪಟಾಕಿ (Firecrackers) ಹೊತ್ತೊಯ್ಯುತ್ತಿದ್ದ ಟ್ರಕ್ ಅಗ್ನಿಗೆ ಆಹುತಿಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ (Uttar Pradesh) ಪೂರ್ವ ಕೊಟ್ವಾಲಿಯ ಖರ್ಗಿ ಖೇಡಾ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ಸ್ಥಳೀಯರು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.
ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಆಚರಿಸಲು ಟ್ರಕ್ವೊಂದರಲ್ಲಿ ಪಟಾಕಿ ಹೊತ್ತೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ಟ್ರಕ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಿಡಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಪಟಾಕಿಗೆ ಹೊತ್ತಿಕೊಂಡಿದೆ. ಹೀಗಾಗಿ ಟ್ರಕ್ ಸಂಪೂರ್ಣ ಭಸ್ಮವಾಗಿದೆ.