ಚೆನ್ನೈ: ಟ್ರಕ್ ಚಾಲಕನೊಬ್ಬ ಟೀ ಅಂಗಡಿಯೊಳಗೆ ವಾಹನ ನುಗ್ಗಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 19 ಜನ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಮೆಂಟ್ ತುಂಬಿದ ಟ್ರಕ್ ಅರಿಯಲೂರಿನಿಂದ ಶಿವಗಂಗೈಗೆ ತೆರಳುತ್ತಿತ್ತು. ಆ ಸಂದರ್ಭದಲ್ಲಿ ಚಾಲಕನಿಗೆ ಮಂಪರು ಆವರಿಸಿದೆ. ಈ ಸಂದರ್ಭದಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ಟೀ ಅಂಗಡಿಗೆ ನುಗ್ಗಿದೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಟೀ ಅಂಗಡಿಯಲ್ಲಿ ಶಬರಿಮಲೆ ಯಾತ್ರಾರ್ಥಿಗಳು ಟೀ ಕುಡಿಯುತ್ತಿದ್ದರು. ಆಗ ಏಕಾಏಕಿ ಟ್ರಕ್ ನುಗ್ಗಿದೆ. ಅಲ್ಲಿ ನಿಲ್ಲಿಸಿದ್ದ ಬೈಕ್ ಹಾಗೂ ಕಾರುಗಳಿಗೆ ಅದು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.