ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್ – 5 ಮಂದಿ ಮೃತ….
ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟು, ಒಬ್ಬರು ಗಂಭೀರವಾಗಿ ಗಾಯಗೊಂಡ ಭೀಕರ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದೆ.
ಭಕ್ತರು ಹರಿದ್ವಾರದಿಂದ ಗ್ವಾಲಿಯರ್‌ಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಶನಿವಾರ ಮುಂಜಾನೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿಯಾದ ಪರಿಣಾಮ ಈ ದುರಂತ ಸಂಭವಿಸಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಆಗ್ರಾ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರಾಜೀವ್ ಕೃಷ್ಣ ಹೇಳಿದ್ದಾರೆ.
ಕನ್ವರ್ ಯಾತ್ರೆ ಎಂಬುದು ಉತ್ತರ ಭಾರತದ ರಾಜ್ಯಗಳಲ್ಲಿ ನಡೆಸಲ್ಪಡುವ ಯಾತ್ರೆ. ಇದರಲ್ಲಿ ಕನ್ವಾರಿಯರು ಅಥವಾ ಯಾತ್ರಿಕರು ಉತ್ತರಾಖಂಡದ ಹಾರ್ದಿವಾರ್, ಗೌಮುಖ ಮತ್ತು ಗಂಗೋತ್ರಿ ಮತ್ತು ಬಿಹಾರದ ಸುಲ್ತಂಗಂಜ್‌ನಂತಹ ಪವಿತ್ರ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಅಲ್ಲಿನ ಗಂಗಾನದಿಯ ಪವಿತ್ರ ನೀರನ್ನು ತಂದು ಶಿವನ ಆರಾಧನೆಗೆ ಬಳಸುತ್ತಾರೆ.








