ಬಾಗಲಕೋಟೆ: ಇಂದು ರಾಜ್ಯದ ಹಲವು ಪ್ರದೇಶಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ.
ಹೀಗೆ ಕೃಷಿ ಇಲಾಖೆ ಅಧಿಕಾರಿಗಳ (Agriculture Department) ಮನೆ ಮೇಲೆ ದಾಳಿ ನಡೆಸಿದ್ದ ಸಂದರ್ಭದಲ್ಲಿ ಎರಡು ಸಾಕು ಆಮೆಗಳು (Tortoise) ಪತ್ತೆಯಾಗಿವೆ. ಬಾಗಲಕೋಟೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಹಾಗೂ ಸಹಾಯಕ ನಿರ್ದೇಶಕ ಕೃಷ್ಣಾ ಶಿರೂರು ಎಂಬುವವರ ಮನೆಯ ಮೇಲೆ ಲೋಕಾಯುಕ್ತ (Karnataka Lokayukta) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಚೇತನಾ ಪಾಟೀಲ್ ಅವರ ಮನೆಯಲ್ಲಿ 2 ಸಾಕು ಆಮೆಗಳು ಪತ್ತೆಯಾಗಿವೆ. ಆಮೆಗಳನ್ನ ಮನೆಯಲ್ಲಿ ಸಾಕಿರುವುದಕ್ಕೆ ಕುತೂಹಲ ವ್ಯಕ್ತಪಡಿಸಿರುವ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳನ್ನೂ ಕರೆಸಿ ಪರಿಶೀಲಿಸಲಾಗುತ್ತಿದೆ. ಅಲ್ಲದೇ, ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರಿನ ಕೆಆರ್‌ಪುರಂ ತಹಶೀಲ್ದಾರ್ ಅಜಿತ್ ರೈ ಮನೆ ಸೇರಿ 10 ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮನೆ, ಕಚೇರಿ ಸೇರಿದಂತೆ 10 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.






