ಮಾಜಿ ಸಿ ಎಂ, ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಒಕ್ಕೂಟ, ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಕೈಗಾರಿಕಾ ಸಂಘಟನೆಗಳ ಪ್ರಮುಖರು ಭೇಟಿ ಮಾಡಿ ಸಭೆ ನಡೆಸಿದರು.
ಸಭೆಯಲ್ಲಿ ಕೊರೊನಾ ವೈರಸ್ ಹರಡುವಿಕೆ ತಡೆಯಲು ಮಾಡಿದ ಲಾಕ್ ಡೌನ್ ನಿಂದ ಆಗಿರುವ ನಷ್ಟಗಳ ಬಗ್ಗೆ ಚರ್ಚಿಸಲಾಗಿದೆ. ಅಲ್ಲದೆ ಲಾಕ್ ಡೌನ್ ಪರಿಸ್ಥಿತಿಯಿಂದ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸುದೀರ್ಘ ಸಮಾಲೋಚನೆ ನಡೆದಿದೆ. ಸರ್ಕಾರ ಕೈಗಾರಿಕೋದ್ಯಮಿಗಳ ನೆರವಿಗೆ ಬರುವಂತೆ ಸರ್ಕಾರ ವನ್ನು ಒತ್ತಾಯಿಸಬೇಕು ಎಂದು ಕುಮಾರಸ್ವಾಮಿ ಅವರ ಬಳಿ ಕೈಗಾರಿಕೆಗಳ ಸಂಘದ ಮುಖಂಡರು ಮನವಿ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕರು ಸರ್ಕಾರದ ಮೇಲೆ ಒತ್ತಡ ತಂದರೆ ಸಮಸ್ಯೆಗಳಿಗೆ ಬೇಗ ಪರಿಹಾರ ಸಿಗಬಹುದು ಎಂಬುದು ಸಂಘದ ಮುಖಂಡರ ಲೆಕ್ಕಾಚಾರವಾಗಿದೆ.
ಸಭೆಯಲ್ಲಿ ಕೈಗಾರಿಕ ಸಂಘಟನೆಗಳ ಪ್ರಮುಖರಾದ ಆರ್ ರಾಜು, ಹನುಮಂತೇಗೌಡ, ರಾಜಗೋಪಾಲ್, ಬೋರೇಗೌಡ, ಕೆ.ಎನ್ ನರಸಿಂಹಮೂರ್ತಿ, ಶ್ರೀನಿವಾಸ್ ಹಾಗೂ ಮಲ್ಲೇಶಗೌಡ ಸೇರಿದಂತೆ ಇನ್ನೂ ಕೆಲವರು ಭಾಗಿಯಾಗಿದ್ದರು.