ಹಾವೇರಿ: ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸೇರಿದಂತೆ 20 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಹತ್ತಿರ ಈ ಘಟನೆ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗುಡ್ಡಪ್ಪ ಕೈದಾಳಿ(40), ಮೈಲಾರಪ್ಪ ಕೈದಾಳಿ(41), ಶಿವರಾಜ್ ಹೊಳೆಪ್ಪನವರ(22) ಸಾವನ್ನಪ್ಪಿದ ದುರ್ದೈವಿಗಳು.
ಬೆಳಗಾವಿಯಿಂದ ಕಾಕೋಳ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಲ್ಲದೇ, ಘಟನೆಯಲ್ಲಿ ಬೀರಪ್ಪ ದೊಡ್ಡಚಿಕ್ಕಣ್ಣನವರ, ನಿಂಗರಾಜ್ ಹಿತ್ತಲಮನಿ ಮತ್ತಯ ನಿಂಗಪ್ಪ ಕೊರಗುಂದ ಅವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.