ಬಹು ಭಾಷಾ ನಟ ಆಶಿಶ್ ವಿದ್ಯಾರ್ಥಿ (Ashish Vidyarthi) ತಮ್ಮ 60ನೇ ವಯಸ್ಸಿನಲ್ಲಿ 2ನೇ ಮದುವೆಯಾಗಿದ್ದು, ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.
ಆಶಿಶ್ ವಿದ್ಯಾರ್ಥಿ ಅವರು ಫ್ಯಾಷನ್ ಇಂಡಸ್ಟ್ರಿಯ ಉದ್ಯಮಿ ರೂಪಾಲಿ (Roopali) ಅವರೊಂದಿಗೆ ದಾಂಪತ್ಯ (Wedding) ಜೀವನಕ್ಕೆ ನಟ ಕಾಲಿಟ್ಟಿದ್ದಾರೆ. ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅವರು ಈ ಹಿಂದೆ ರಾಜೋಶಿ ಎಂಬುವವರನ್ನು ಮದುವೆಯಾಗಿದ್ದರು. ಈ ದಾಂಪತ್ಯಕ್ಕೆ ಹಲವು ವರ್ಷಗಳ ಹಿಂದೆಯೇ ಬ್ರೇಕ್ ಬಿದ್ದಿತ್ತು.
ಉದ್ಯಮಿ ರೂಪಾಲಿ ಅವರನ್ನು ಸದ್ಯ ನಟ ಆಶಿಶ್ 2ನೇ ಮದುವೆಯಾಗಿದ್ದಾರೆ. ಈ ಜೋಡಿ ಕೊಲ್ಕತ್ತಾದ ಕ್ಲಬ್ ನಲ್ಲಿ ಮೇ25ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ಆಪ್ತರು, ಗುರುಹಿರಿಯರ ಸಮ್ಮುಖದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಮಾತನಾಡಿರುವ ಆಶಿಶ್, ನಮ್ಮಿಬ್ಬರ ಭೇಟಿ, ಪ್ರೇಮ ಹಾಗೂ ವಿವಾಹದ ಬಗ್ಗೆ ಸದ್ಯದಲ್ಲಿಯೇ ಹೇಳುತ್ತೇನೆ ಎಂದು ಹೇಳಿದ್ದಾರೆ.