ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್‌ ಡಾಕ್ಯುಮೆಂಟ್‌

Mahesh M Dhandu by Mahesh M Dhandu
August 24, 2022
in Health, Newsbeat, ಅಪರಾಧ
A vision document for the health sector in the state for the first time in the country saaksha tv

A vision document for the health sector in the state for the first time in the country saaksha tv

Share on FacebookShare on TwitterShare on WhatsappShare on Telegram

ದೇಶದಲ್ಲೇ ಪ್ರಪ್ರಥಮ ಬಾರಿಗೆ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರಕ್ಕಾಗಿ ವಿಷನ್‌ ಡಾಕ್ಯುಮೆಂಟ್‌

ಬೆಂಗಳೂರು : ಇಡೀ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರದ ದೂರದೃಷ್ಟಿಗಾಗಿ ʼಕರ್ನಾಟಕ ವಿಷನ್‌ ವರದಿʼ ಹೊರತರಲಾಗಿದೆ. ಇದು ಐತಿಹಾಸಿಕ ದಿನವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಬಣ್ಣಿಸಿದರು.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ವಿಧಾನಸೌಧದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿ, ʼಕರ್ನಾಟಕ ವಿಷನ್‌ ವರದಿʼ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, ಡಾ.ಗುರುರಾಜ್‌ ನೇತೃತ್ವದ ತಂಡ ಒಂದು ವರ್ಷ ಕಾಲ ಅಧ್ಯಯನಗಳು, ಸಂಶೋಧನೆಗಳು, ಸಭೆಗಳನ್ನು ನಡೆಸಿ ಈ ವರದಿ ರೂಪಿಸಿದೆ. 250 ಕ್ಕೂ ಅಧಿಕ ತಜ್ಞರು ಈ ವರದಿ ರೂಪಿಸಲು ಸಲಹೆ ನೀಡಿದ್ದಾರೆ.

ಬೇರೆ ದೇಶಗಳ ಉತ್ತಮ ಕ್ರಮಗಳನ್ನು ಕೂಡ ಇಲ್ಲಿ ದಾಖಲಿಸಲಾಗಿದೆ. ಟೆಲಿ ಮೆಡಿಸಿನ್‌, ಗ್ರಾಮೀಣ ಪ್ರದೇಶದಿಂದ ಆರಂಭವಾಗಿ ತೃತೀಯ ಹಂತದ ಆರೋಗ್ಯ ಸೇವೆ ಸೇರಿದಂತೆ ಅನೇಕ ಅಂಶಗಳನ್ನು ಇದು ಒಳಗೊಂಡಿದೆ. ಇದನ್ನು ಮುಖ್ಯಮಂತ್ರಿಗಳು ಪ್ರಧಾನಿಗಳಿಗೂ ನೀಡಲಿದ್ದಾರೆ ಎಂದರು.

A vision document for the health sector in the state for the first time in the country  saaksha tv
A vision document for the health sector in the state for the first time in the country saaksha tv

ಅನೇಕರು ವೈದ್ಯರ ಕೈ ಗುಣ ನಂಬುತ್ತಾರೆ. ರೋಗಿಗಳಿಗೆ ವೈದ್ಯರ ಮೇಲೆ ಇರುವ ನಂಬಿಕೆ, ಪ್ರೀತಿಯನ್ನು ಇದು ತೋರಿಸುತ್ತದೆ. ಹಾಗೆಯೇ ವೈದ್ಯರು ಹಾಗೂ ರೋಗಿಗಳ ನಡುವಿನ ಬಾಂಧವ್ಯವನ್ನು ಸೂಚಿಸುತ್ತದೆ. ದೇವರು ಎಲ್ಲಾ ಕಡೆ ಇರಲು ಸಾಧ್ಯವಿಲ್ಲವೆಂದೇ ವೈದ್ಯರನ್ನು ಸೃಷ್ಟಿಸಲಾಗಿದೆ ಎಂದೂ ಹೇಳಲಾಗುತ್ತದೆ. ಆ ಮಟ್ಟಿಗೆ ಸಮಾಜ ವೈದ್ಯರನ್ನು ಗೌರವಿಸುತ್ತದೆ ಎಂದರು.

ಮೂರನೇ ಡೋಸ್‌ನಲ್ಲಿ ಶೇ.100 ರಷ್ಟು ಸಾಧನೆಗೆ ಶ್ರಮಿಸಿ

ಕಳೆದ ನೂರು ವರ್ಷಗಳಲ್ಲೂ ಕಾಣದ ಕೋವಿಡ್‌ ಸಾಂಕ್ರಾಮಿಕವನ್ನು ನಾವೆಲ್ಲರೂ ಎದುರಿಸಿದ್ದೇವೆ. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ಸು ಕಾಣಲು ವೈದ್ಯರೇ ಪ್ರಮುಖ ಕಾರಣರಾಗಿದ್ದಾರೆ. ಕೋವಿಡ್‌ ಲಸಿಕಾಕರಣದಲ್ಲಿ ಎರಡು ಡೋಸ್‌ಗಳಲ್ಲಿ ಶೇ.100 ರಷ್ಟು ಸಾಧನೆ ಆಗಿದೆ. ಇದಕ್ಕೂ ವೈದ್ಯರ ಶ್ರಮವೇ ಕಾರಣವಾಗಿದೆ. ಹಾಗೆಯೇ, ಮೂರನೇ ಡೋಸ್‌ನಲ್ಲೂ ಶೇ.100 ರಷ್ಟು ಸಾಧನೆ ಮಾಡಲು ಎಲ್ಲಾ ವೈದ್ಯರು ಶ್ರಮಿಸಬೇಕು ಎಂದು ಸಚಿವರು ಕೋರಿದರು.

ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಈವರೆಗೆ ಕೆಡರ್‌ ಮಾಡಲು ಸಾಧ್ಯವಾಗಿರಲಿಲ್ಲ. ಇದಕ್ಕಾಗಿ ಸಮಿತಿ ರಚಿಸಿದ್ದು, ಆ ವರದಿಯ ಅನ್ವಯ ಕ್ರಮ ವಹಿಸಲಾಗುತ್ತದೆ. ಇದು ಕೂಡ ಐತಿಹಾಸಿಕ ಹಾಗೂ ಕ್ರಾಂತಿಕಾರಿಕ ನಿರ್ಣಯ ಎಂದರು.

ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಗೆ ಸರ್ಕಾರ ಆದ್ಯತೆ ನೀಡಿದ್ದು, ಉತ್ತರ ಕರ್ನಾಟಕ ಸೇರಿದಂತೆ ಅಭಿವೃದ್ಧಿ ವಂಚಿತ ಜಿಲ್ಲೆಗಳಲ್ಲಿ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಒಂದು ತಿಂಗಳಲ್ಲೇ ಇದಕ್ಕೆ ಶಂಕುಸ್ಥಾಪನೆ ನೆರವೇರಲಿದೆ. ನಗರಗಳಲ್ಲಿ ಬಿಪಿಎಲ್‌ ಕುಟುಂಬಗಳು ಹೆಚ್ಚಿರುವ ಸ್ಥಳಗಳಲ್ಲಿ ʼನಮ್ಮ ಕ್ಲಿನಿಕ್‌ʼ ಆರಂಭಿಸಲಾಗುತ್ತಿದೆ. ಎರಡು ತಿಂಗಳೊಳಗೆ ಬೆಂಗಳೂರಿನಲ್ಲಿ 243 ಕ್ಲಿನಿಕ್‌ ಕಾರ್ಯಾರಂಭವಾಗಲಿದೆ ಎಂದರು.

Tags: #Saaksha TVDr. K Sudhakarhealth sectorvision document
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram