ಕಾರವಾರ: ಕಾಡು ಹಂದಿಯೊಂದು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರಿನಲ್ಲಿ ನಡೆದಿದೆ. ಜೆಸಿಬಿ ಆಪರೇಟರ್ ಮೇಲೆ ಕಾಡು ಹಂದಿ ದಾಳಿ ನಡೆಸಿದೆ. ಜೆಜೆಎಂ ಕಾಮಗಾರಿ ಮಾಡುತ್ತಿದ್ದ ಜೆಸಿಬಿ ಆಫರೇಟರ್ ಮೇಲೆ ಹಂದಿ ದಾಳಿ ಮಾಡಿದೆ. ದಾಳಿಯಿಂದಾಗಿ ಒರಿಸ್ಸಾ ಮೂಲದ ಮನು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.
ವ್ಯಕ್ತಿಯ ಮುಖ ಹಾಗೂ ಎದೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಮನುಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ವ್ಯಕ್ತಿಯನ್ನು ಮಣಿಪಾಲ್ ಗೆ ದಾಖಲಿಸಲಾಗಿದೆ.