ಚಿಕ್ಕಮಗಳೂರು : ಮಹಿಳೆಯೊಬ್ಬರಿಗೆ ಆಂಬುಲೆನ್ಸ್ ನಲ್ಲಿಯೇ ಹೆರಿಗೆಯಾಗಿರುವ ಘಟನೆ ನಡೆದಿದೆ.
ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಗರ್ಭೀಣಿಯನ್ನು ಬಾಳೆಹೊನ್ನೂರಿನಿಂದ ಕೊಪ್ಪ ಆಸ್ಪತ್ರೆಗೆ ಅಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಹೋಗುವ ವೇಳೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಗ ಮಹಿಳೆ ನೋವು ಸಹಿಸದೆ, ಜೋರಾಗಿ ಕಿರುಚಿಕೊಂಡಿದ್ದಾರೆ.
ಈ ವೇಳೆ ಅಂಬ್ಯುಲೆನ್ಸ್ನಲ್ಲಿದ್ದ ಸಿಬ್ಬಂದಿ ಅಶ್ವಿನ್ ಹಾಗೂ ಚಾಲಕ ಮನ್ಸೂರ್ ಅವರು ಹೆರಿಗೆ ಮಾಡಿಸಲು ಮುಂದಾಗಿದ್ದಾರೆ. ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದೆ. ನಂತರ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.