ಬೆಂಗಳೂರು: ಮಹಿಳೆಯೊಬ್ಬರು 60 ಅಡಿ ಎತ್ತರದ ಮೇಲ್ಸೇತುವೆಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ವೈಯಕ್ತಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಮನನೊಂದು ಈ ರೀತಿ ಮಾಡಲು ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಇಲ್ಲಿಯ ಪ್ರಗತಿ ನಗರದ ನಿವಾಸಿ ಒಮಿಕಾ ಮಿಶ್ರಾ (28) ಎಲೆಕ್ಟ್ರಾನಿಕ್ ಸಿಟಿಯ ನೈಸ್ ರಸ್ತೆ ಮಾರ್ಗವಾಗಿ ಇರುವ ಮೇಲ್ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.
ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಸಾವು- ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದು, ದೇಹದ ಬಹುತೇಕ ಮೂಳೆಗಳು ಮುರಿದು ಹೋಗಿವೆ. ವಾಕಿಂಗ್ ಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಬಂದು ಈ ರೀತಿ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಜಾರ್ಖಂಡ್ ರಾಜ್ಯದ ಆದಿತ್ಯ ಮಿಶ್ರಾ ಹಾಗೂ ಒಮಿಕಾ ಮಿಶ್ರಾ ಇತ್ತೀಚೆಗಷ್ಟೇ ವಿವಾಹವಾಗಿದ್ದರು. ಪತಿ ಎಲೆಕ್ಟ್ರಾನಿಕ್ ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಇಬ್ಬರ ಮಧ್ಯೆ ಮನಸ್ತಾಪ ಏರ್ಪಟ್ಟಿತ್ತು ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.