ಮಂಗಳೂರು : ಮಹಿಳೆಯೊಬ್ಬರು ವಿಷಕಾರಿ ಜ್ಯೂಸ್ ಕುಡಿದು ಸಾವನ್ನಪ್ಪಿದ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಹತ್ತಿರದ ಶೇಣಿ ಎಂಬಲ್ಲಿ ನಡೆದಿದೆ. ಶೇಣಿ ಹತ್ತಿರದ ಕುಳ್ಳಾಜೆ ನಿವಾಸಿಯಾಗಿರುವ 35 ವರ್ಷದ ಲೀಲಾವತಿ ಸಾವನ್ನಪ್ಪಿರುವ ಮಹಿಳೆಯಾಗಿದ್ದಾರೆ. ಅವರು ಮೈರೋಲ್ ಹಣ್ಣು ಎಂದು ಭಾವಿಸಿ ವಿಷಕಾರಿ ಹಣ್ಣಿನ ಜ್ಯೂಸ್ (Fruit Juice) ಕುಡಿದಿದ್ದರಿಂದಾಗಿ ಸಾವನ್ನಪ್ಪಿದ್ದಾರೆ.
ಕಳೆದ ಒಂದು ವಾರದ ಹಿಂದೆ ಮಹಿಳೆಯ ತಂದೆ ಕೂಡ ಮೈರೋಲ್ ಹಣ್ಣಿನ ಜ್ಯೂಸ್ ಕುಡಿದಿದ್ದರು.ಈಗ ಲೀಲಾವತಿ ಕುಡಿದಿದ್ದರು. ಪರಿಣಾಮ ಲೀಲಾವತಿ ಅವರಿಗೆ ವಾಂತಿ, ಭೇದಿಯಾಗಿ ಸುಳ್ಯ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಿಸುವ ಸಂದರ್ಭದಲ್ಲಿ ದಾರಿಯ ಮಧ್ಯೆಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಲೀಲಾವತಿ ಅವರ ತಂದೆ ಅಪಾಯದಿಂದ ಪಾರಾಗಿದ್ದಾರೆ. ಈ ಮೈರೋಲ್ ಹಣ್ಣು ಕಾಡಿನಲ್ಲಿ ಹೆಚ್ಚಾಗಿ ಸಿಗುತ್ತದೆ. ಆದರೆ, ಮೈರೋಲ್ ಹಣ್ಣು ಎಂದು ಭಾವಿಸಿ, ಯಾವುದೋ ವಿಷಯುಕ್ತ ಹಣ್ಣಿನ ಜ್ಯೂಸ್ ಕುಡಿದಿದ್ದರಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.