ಚಿಕ್ಕಬಳ್ಳಾಪುರ : ಮಹಿಳೆಯೊಬ್ಬರು ಮನೆಯ ಮುಂದೆ ಅಕ್ರಮವಾಗಿ ಗಾಂಜಾ ಬೆಳೆದು ಪೊಲೀಸರ ಅತಿಥಿಯಾಗಿದ್ದಾರೆ.
ಹೀಗಾಗಿ ಮಳೆಯು ಪೊಲೀಸರ ಅತಿಥಿಯಾಗಿದ್ದಾರೆ. ಈ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಆಸ್ಪತ್ರೆಯ (Government Hospital) ಮುಂಭಾಗದ ಪ್ರಮೀಳಮ್ಮ ಮನೆಯ ಕಾಂಪೌಂಡ್ನಲ್ಲಿಯೇ ಅಕ್ರಮವಾಗಿ ಗಾಂಜಾ ಗಿಡಗಳನ್ನ ಬೆಳೆಸಿದ್ದಳು. ದಾಳಿ ನಡೆಸಿದ ಪೊಲೀಸರು 66 ಸಾವಿರ ರೂ. ಮೌಲ್ಯದ 11.5 ಕೆಜಿಯಷ್ಟು ಹಸಿ ಗಾಂಜಾ ಗಿಡಗಳನ್ನ ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಪ್ರಮೀಳಮ್ಮನನ್ನು ವಶಕ್ಕೆ ಪಡೆದು, ತನಿಖೆ ಕೈಗೊಂಡಿದ್ದಾರೆ.