ಬೆಂಗಳೂರು: ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ (GangRape) ನಡೆಸಿರುವ ಆರೋಪವೊಂದು ಕೇಳಿ ಬಂದಿದೆ.
ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಗಣೇಶ್, ಶರವಣ ಬಂಧಿತ ಆರೋಪಿಗಳು.
ಕೆ.ಆರ್ ಮಾರ್ಕೆಟ್‌ನಲ್ಲಿ (KR Market) ಕೂಲಿ ಕೆಲಸ ಮಾಡಿಕೊಂಡಿದ್ದ ಆರೋಪಿಗಳು, ಭಾನುವಾರ ಮಧ್ಯರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಬಂದಿದ್ದ ಮಹಿಳೆ ಯಲಹಂಕಕ್ಕೆ ತೆರಳಲು ಮುಂದಾಗಿದ್ದರು. ಈ ವೇಳೆ ಬಸ್ ಬರುವ ಜಾಗ ತೋರಿಸತ್ತೇವೆ ಅಂತಾ ಬಸ್ ನಿಲ್ದಾಣದ ಸಮೀಪದಲ್ಲೇ ಇರುವ ಗೋಡೌನ್ ಸ್ಟ್ರೀಟ್‌ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಅತ್ಯಾಚಾರ ಮಾಡಿ ಮಹಿಳೆಯ ಮೇಲಿದ್ದ ಆಭರಣಗಳನ್ನ ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಸಂತ್ರಸ್ತ ಮಹಿಳೆ ಬೆಂಗಳೂರಿನ ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.








