ಕೆರೆಯಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಿತ್ತಾಮಂಗಲ ಗ್ರಾಮದ ಕೆರೆಯಲ್ಲಿಯೇ ಮಹಿಳೆಯ ಶವ ಪತ್ತೆಯಾಗಿದೆ. 22 ವರ್ಷದ ರಂಜಿತಾ ಕಳೆದ 6 ತಿಂಗಳ ಹಿಂದೆ ನಾಪತ್ತೆಯಾಗಿದ್ದರು. ಆದರೆ, ಈಗ ಕಲ್ಲುಪಾಳ್ಯದ ಬುದ್ಧಿಮಾಂದ್ಯೆ ರಂಜಿತಾ ಅಸ್ಥಿಪಂಜರ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.