ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಭರ್ಜರಿ ಪ್ರದರ್ಶನ ತೋರಿದ್ದು, ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದಿದ್ದಾರೆ.
ಈಗಾಗಲೇ ಇಂಗ್ಲೆಂಡ್ ವಿರುದ್ಧ ಭಾರತ ತಂಡವು ಎರಡು ಪಂದ್ಯಗಳನ್ನಾಡಿದ್ದು, ಮೊದಲ ಪಂದ್ಯದಲ್ಲಿ ಭಾರತ ಸೋತರೆ, ಎರಡನೇ ಪಂದ್ಯದಲ್ಲಿ ಗೆದ್ದಿದೆ. ಆದರೆ, ಎರಡೂ ಪಂದ್ಯದಲ್ಲಿ ಬುಮ್ರಾ ಭರ್ಜರಿ ಪ್ರದರ್ಶನ ತೋರಿದ್ದರು.
ಹೀಗಾಗಿ ಜಸ್ಪ್ರೀತ್ ಬುಮ್ರಾ, ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಶ್ರೇಯಾಂಕದಲ್ಲಿ ಮೊದಲ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ಕಬಳಿಸಿದ್ದರೆ, ಎರಡನೇ ಇನ್ನಿಂಗ್ಸ್ನಲ್ಲಿ 4 ವಿಕೆಟ್ ಪಡೆದಿದ್ದರು. ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ 6 ವಿಕೆಟ್ ಪಡೆದಿದ್ದರೆ, ಎರಡನೇ ಇನ್ನಿಂಗ್ಸ್ ನಲ್ಲಿ 3 ವಿಕೆಟ್ ಪಡೆದಿದ್ದರು. ಹೀಗಾಗಿ ಮುಂಬಡ್ತಿ ಪಡೆದು ಅಗ್ರರಾಗಿದ್ದಾರೆ.