ಮಡಿಕೇರಿ: ಯುವಕನೊಬ್ಬನು ಚಾರಕ್ಕೆ (Trekking) ತೆರಳಿದ್ದ ಸಂದರ್ಭದಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜತಿನ್ ಕುಮಾರ್ (25) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಹರಿಯಾಣ (Haryana) ಮೂಲದ ನಿವಾಸಿ ಎನ್ನಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾ. ತಡಿಯಂಡಮೋಳು ಬೆಟ್ಟ ವೀಕ್ಷಣೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಸಾವನ್ನಪ್ಪಿದ ಜತಿನ್ ಕುಮಾರ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಸ್ನೇಹಿತರೊಂದಿಗೆ ಮಡಿಕೇರಿಗೆ ತೆರಳಿದ್ದ. ಈ ವೇಳೆ ಬೆಟ್ಟ ತಲುಪಿದಾಗ ಎದೆನೋವು ಕಾಣಿಸಿಕೊಂಡಿದೆ. ನಂತರ ನೋವು ಜಾಸ್ತಿಯಾಗಿ ಅಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಮೃತದೇಹ ತಂದಿದ್ದಾರೆ. ಈ ಕುರಿತು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.