ಪೊಲೀಸರು ಸಾರ್ವಜನಿಕ ಸ್ಥಳದಲ್ಲಿ ಹಲ್ಲೆ ನಡೆಸಿದ್ದಾರ ಎಂಬ ಕಾರಣಕ್ಕೆ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ಹೊಳೆಹೊನ್ನೂರು (Holehonnur) ನಿವಾಸಿ ಮಂಜುನಾಥ್ (23) ಆತ್ಮಹತ್ಯೆ ಮಾಡಿಕೊಂಡ ದುರ್ದೈವ ವ್ಯಕ್ತಿ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹೊಳೆಹೊನ್ನೂರಿನ ಕೆನ್ನೆಕೊಪ್ಪದಲ್ಲಿ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಹಲ್ಲೆ ಮಾಡಿದ್ದರಿಂದ ಮನನೊಂದು ಮಂಜುನಾಥ್ ಆತ್ಮಹತ್ಯೆ ಯುವಕ ಶರಣಾಗಿದ್ದಾನೆ ಎನ್ನಲಾಗಿದೆ.
ಸಾವಿಗೆ ಪೊಲೀಸರೇ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ. ಸದ್ಯ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ಪೊಲೀಸರ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಲಾಗಿದೆ.








