ತುಮಕೂರು: ಯುವಕನೊಬ್ಬ ನಿಶ್ಚಿತಾರ್ಥದ ರಿಂಗ್ ಕಳೆದು ಹೋಗಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ದೇವರಾಯಪಟ್ಟಣದಲ್ಲಿ ನಡೆದಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಮಲೇಶ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ಕಮಲೇಶ್ ಅವರಿಗೆ ಬೆಂಗಳೂರು ಮೂಲದ ಯುವತಿಯೊಂದಿಗೆ ಮೂರು ತಿಂಗಳ ಹಿಂದೆ ನಿಶ್ಚಿತಾರ್ಥವಾಗಿತ್ತು. ಆದರೆ, ಕೆಲವು ದಿನಗಳ ಹಿಂದೆ ಸ್ನಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ರಿಂಗ್ ಕಳೆದು ಹೋಗಿತ್ತು. ಎಷ್ಟು ಹುಡುಕಿದರೂ ರಿಂಗ್ ಸಿಕ್ಕಿರಲಿಲ್ಲ. ಈ ವಿಚಾರವನ್ನು ಮನೆಯವರೊಂದಿಗೆ ಹೇಳಲು ಹೆದರಿ ನ.17 ರಂದು ಯುವಕ ವಿಷ ಸೇವಿಸಿದ್ದಾನೆ ಎನ್ನಲಾಗಿದೆ.
ಕೂಡಲೇ ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.