ಬೆಂಗಳೂರು: ಯುವಕನೊಬ್ಬ ಪ್ರಶಸ್ತಿ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯ (Bengaluru) ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾಬಿನ್(22) ಸಾವನ್ನಪ್ಪಿದ ವ್ಯಕ್ತಿ ಎನ್ನಲಾಗಿದೆ. ಸಾವನ್ನಪ್ಪಿದ ವ್ಯಕ್ತಿ ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಗಣರಾಜ್ಯೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.
ಈ ಟೂರ್ನಿಯಲ್ಲಿ ರಾಬಿನ್ ಉತ್ತಮ ಪ್ರದರ್ಶನ ತೋರಿದ್ದರು. ಹೀಗಾಗಿ ಪಂದ್ಯ ಗೆದ್ದ ನಂತರ ಖುಷಿ ಖುಷಿಯಾಗಿ ಪ್ರಶಸ್ತಿ ಸ್ವೀಕರಿಸುತ್ತಿದ್ದಂತೆ ವೇದಿಕೆ ಮೇಲೆಯೇ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.








