ಉತ್ತರ ಪ್ರದೇಶ : ಇತ್ತೀಚೆಗೆ ವರ್ಕೌಟ್ ಮಾಡುತ್ತಿರುವಾಗಲೇ ಯುವಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಸದ್ಯ ಇಂತಹ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಯುವಕನೊಬ್ಬ ಜಿಮ್ ನ ಟ್ರೆಡ್ ಮಿಲ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸರಸ್ವತಿ ವಿಹಾರದಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಸಿದ್ಧಾರ್ಥ್ ಕುಮಾರ್ ಸಿಂಗ್(21) ಎಂದು ಗುರುತಿಸಲಾಗಿದೆ.
ಸಿದ್ಧಾರ್ಥ್ ಕುಮಾರ್ ಜಿಮ್‌ನಲ್ಲಿ ಕುಸಿದುಬಿದ್ದ ಕೂಡಲೇ ಆತನ ಸಹಾಯಕ್ಕೆ ಧಾವಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ದುರದೃಷ್ಟವಶಾತ್ ಯುವಕ ಸಾವನ್ನಪ್ಪಿದ್ದಾನೆ. ಯುವಕನ ತಾಯಿ ಬಿಹಾರದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ದುರಂತ ಘಟನೆಗೆ 10 ನಿಮಿಷಗಳ ಮೊದಲು ಸಿಂಗ್ ತನ್ನ ತಾಯಿಯೊಂದಿಗೆ ಮಾತನಾಡಿದ್ದರು ಎನ್ನಲಾಗಿದೆ.