ಶಿವಮೊಗ್ಗ: ಹೋರಿ ತಿವಿದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ.
ಪುನೀತ್ ಆಚಾರ್(19) ಹೋರಿ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ಹಾಸ್ಟೆಲ್ ನಲ್ಲಿ ಐಟಿಐ ಓದುತ್ತಿದ್ದ. ಹೋರಿ ತಿವಿದಿದ್ದರಿಂದಾಗಿ ಆತ ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಕುರಿತು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.