ಮಂಗಳೂರು: ಹುಲಿವೇಷ ಕುಣಿತದ ಸಂದರ್ಭದಲ್ಲಿ ಯುವಕನೊಬ್ಬ ಆಯತಪ್ಪಿ ಬಿದ್ದು, ಗಾಯ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ (Mangaladevi Temple) ನಡೆದಿದೆ. ಯುವಕ ದೇವರ ಎದುರು ಹುಲಿವೇಷ ಧರಿಸಿ ಪ್ರದರ್ಶನದ ಮಾಡುತ್ತಿದ್ದ. ಈ ಸಂದರ್ಭದಲ್ಲಿ ಆಯತಪ್ಪಿ ಬಿದ್ದಿದ್ದಾನೆ. ಆಗ ಕತ್ತಿಗೆ ಪೆಟ್ಟಾಗಿದೆ ಎನ್ನಲಾಗಿದೆ. ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದ. ಈ ಸಂದರ್ಭದಲ್ಲಿ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದೆ.
ಕೂಡಲೇ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕ ಅಪಾಯದಿಂದ ಪಾರಾಗಿದ್ದಾರೆ. ನಿರಂತರ ಅಭ್ಯಾಸದ ಜೊತೆಗೆ ಹಲವು ವರ್ಷಗಳಿಂದ ಹುಲಿವೇಷ ಕಸರತ್ತು ನಡೆಸುತ್ತಿದ್ದರು