ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆಸ್ಪತ್ರೆ ಸೇರಿದ ಯುವಕ hospital saaksha tv
ಬೆಂಗಳೂರು : ಸಂಚಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವ ವೇಳೆ ಬೈಕ್ ಡಿವೈಡರ್ ಗೆ ಡಿಕ್ಕಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ವಿಜಯನಗರದ ಅತ್ತಿಗುಪ್ಪೆಯಲ್ಲಿ ನಡೆದಿದೆ.
18 ವರ್ಷದ ಬೈಕ್ ಸವಾರ ಕೌಸಿಕ್ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾನೆ.
ವಿಜಯನಗರ ಟ್ರಾಫಿಕ್ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ರು. ಈ ವೇಳೆ ಹೆಲ್ಮೆಟ್ ಹಾಕದೇ ಬೈಕ್ ನಲ್ಲಿ ಬರ್ತಿದ್ದ ಯುವಕ ಕೌಸಿಕ್. ಪೊಲೀಸರನ್ನು ಕಂಡು ಯೂ ಟರ್ನ್ ತೆಗೆದುಕೊಂಡು ಎಸ್ಕೇಪ್ ಆಗಲು ಯತ್ನಿಸಿದ್ದಾನೆ.
ಈ ವೇಳೆ ಡಿವೈಡರ್ ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರ ಸ್ವರೂಪದ ಗಾಯವಾಗಿದೆ. ಸದ್ಯ ಯುವಕ ಕೌಸಿಕ್ ಬ್ರೈನ್ ಡೆತ್ ಆಗಿದ್ದು ಚಿಕಿತ್ಸೆ ಮುಂದುವರೆದಿದೆ.
ಇತ್ತ ಪೊಲೀಸರ ಯಡವಟ್ಟಿನಿಂದಲೇ ಈ ಘಟನೆ ನಡೆದಿದೆ ಎಂದು ಪೋಷಕರು ಆರೋಪಿಸುತ್ತಿದ್ದಾರೆ. ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ, ಆಗ ಭಯಗೊಂಡು ವೇಗವಾಗಿ ಹೋಗಿ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿದ್ದಾರೆ.









