ಚಿಕ್ಕಬಳ್ಳಾಪುರ: ಯುವಕನೋರ್ವನನ್ನು ದುಷ್ಕರ್ಮಿಗಳು ಗ್ರಾಮದಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಬಾಗೇಪಲ್ಲಿ (Bagepalli) ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಗಜೇಂದ್ರ (28) ಕೊಲೆಯಾಗಿರುವ ಯುವಕ. ಮೃತ ವ್ಯಕ್ತಿ ಚಾಲಕನಾಗಿ ಜೀವನ ಸಾಗಿಸುತ್ತಿದ್ದ ಎನ್ನಲಾಗಿದೆ.
ಗ್ರಾಮದಲ್ಲಿನ ಮದ್ಯದ ಅಂಗಡಿ ಹತ್ತಿರ ಯುವಕರ ಮಧ್ಯೆ ಗಲಾಟೆ ನಡೆದಿದೆ. ಆದರೆ, ಯಾವ ಕಾರಣಕ್ಕೆ ಈ ಕೊಲೆಯಾಗಿದೆ ಎಂಬುವುದು ಮಾತ್ರ ತಿಳಿದಿಲ್ಲ. ರಕ್ತಸಿಕ್ತವಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಿಗ್ಗೆ ಜನರು ನಡುರಸ್ತೆಯಲ್ಲಿಯೇ ಮೃತದೇಹ ಕಂಡು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಬಾಗೇಪಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.