ತುಮಕೂರು: ಯುವಕನೊಬ್ಬನನ್ನು ಹೈವೆಯ ಪಕ್ಕದಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.
ತುಮಕೂರು ತಾಲೂಕಿನ ಬೆಳಧರ ಗ್ರಾಮದಲ್ಲಿಯೇ ಈ ಘಟನೆ ನಡೆದಿದೆ. ಸದ್ಯ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಹೋಬಲ ಅಗ್ರಹಾರ ಗ್ರಾಮದ ಹನುಮಂತರಾಜು ಮೃತ ದುರ್ದೈವಿ ಎನ್ನಲಾಗಿದೆ. ಆದರೆ, ಈ ಹತ್ಯೆಗೆ ಯಾವುದೇ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪೊಲೀಸರ ತನಿಖೆಯ ನಂತರ ಘಟನೆಯ ನಿಖರ ಕಾರಣ ತಿಳಿದು ಬರಲಿದೆ ಎನ್ನಲಾಗಿ.