ಬೆಂಗಳೂರು: ಬೈಕ್ ತಾಗಿದ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ಗುಂಪೊಂದು ಯುವಕನೊಬ್ಬನನ್ನು ಅಟ್ಟಾಡಿಸಿ ಹೊಡೆದು, ಮನಬಂದಂತೆ ಥಳಿಸಿ, ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಹೆಬ್ಬಾಳದ (Hebbal) ಎಸ್ ಎಸ್ ವಿ ರಸ್ತೆಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ವಿಕ್ರಮ್ ಎಂದು ಗುರುತಿಸಲಾಗಿದೆ. ಟ್ರಾಫಿಕ್ ನಲ್ಲಿ ವಾಹನ ಚಲಾಯಿಸುವಾಗ ಬೈಕ್ ತಾಗಿರುವ ವಿಚಾರಕ್ಕೆ ಕಿಡಿಗೇಡಿಗಳು ವಿಕ್ರಮ್ ಜೊತೆ ಜಗಳವಾಡಿದ್ದಾರೆ. ನಂತರ ಬೈಕ್ ನಲ್ಲಿ ತೆರಳುತ್ತಿದ್ದ ಆತನನ್ನು ಹಿಂಬಾಲಿಸಿ ರಸ್ತೆಯಲ್ಲಿ ಅಟ್ಟಾಡಿಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಮದನ್, ನಿತಿನ್ ಹಾಗೂ ಪ್ರಕಾಶ್ ಹಲ್ಲೆ ನಡೆಸಿದ ದುಷ್ಕರ್ಮಿಗಳು. ಗಾಯಗೊಂಡ ಯುವಕನನ್ನು ರಕ್ಷಿಸಿದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಈ ಕುರಿತು ಹೆಬ್ಬಾಳ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.








