ಶಿವಮೊಗ್ಗ: ಸೆಲ್ಫಿ ಹುಚ್ಚಿಗೆ ಮತ್ತೊಬ್ಬ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ಯಡೂರು ಹತ್ತಿರದ ಅಬ್ಬಿ ಜಲಪಾತದಲ್ಲಿ (Abbi Falls) ಈ ಘಟನೆ ನಡೆದಿದೆ. ಸಾವನ್ನಪ್ಪಿದ ಯುವಕನನ್ನು ಬಳ್ಳಾರಿ ಮೂಲದ ವಿನೋದ್ (26) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ 12 ಜನ ಯುವಕರು ಪ್ರವಾಸಕ್ಕೆಂದು ಆಗಮಿಸಿದ್ದರು. ಈ ಸಂದರ್ಭದಲ್ಲಿ ಯುವಕ ಫಾಲ್ಸ್ ಹತ್ತಿರ ಸೆಲ್ಫಿ ತೆಗೆಯಲು ಹೋಗಿ ಬಿದ್ದಿದ್ದಾನೆ.
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.