ಹುಬ್ಬಳ್ಳಿ: ಸ್ನೇಹಿತರೇ ಹತ್ಯೆ ಮಾಡಿರುವ ಘಟನೆ ತಾಲೂಕಿನ ನಾಗಶೆಟ್ಟಿಕೊಪ್ಪದಲ್ಲಿ ನಡೆದಿದೆ.
ಸ್ನೇಹಿತರಿಂದಲೇ ಹತ್ಯೆಯಾದ ವ್ಯಕ್ತಿಯನ್ನು ಪೈಲ್ವಾನ್ ಪ್ರಕಾಶ್ ಮಾನೆ ಎಂದು ಗುರುತಿಸಲಾಗಿದೆ. ಈತನ ಗೆಳೆಯರಾದ ಕಿರಣ್ ಬಡಿಗೇರ ಹಾಗೂ ಸಂಗಮೇಶ ಸೇರಿಕೊಂಡು ಚಾಕುವಿನಿಂದ ಹೊಟ್ಟೆಗೆ ಇರಿದು, ಕಟ್ಟಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಆದರೆ, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಈ ಕುರಿತು ಕೇಶ್ವಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.