ಚಿಕ್ಕಮಗಳೂರು: ಮೀನು ಹಿಡಿಯಲು ಹೋದ ಯುವಕರಿಬ್ಬರು ನೀರುಪಾಲಾದ ಘಟನೆ ಜಿಲ್ಲೆಯಲ್ಲೆ ನಡೆದಿದೆ.
ಈ ಘಟನೆ ಜಿಲ್ಲೆಯ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಇಬ್ಬರು ಯುವಕರು ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಹಾಸನ ಮೂಲದ ಕಿಶೋರ್(19), ತನ್ಮಯ್(18) ಮೃತರು. ಹಾಸನದಿಂದ ಕೂಲಿ ಕೆಲಸಕ್ಕೆ ಮೂಡಿಗೆರೆಗೆ ಬಂದಿದ್ದರು. ಇಬ್ಬರ ಶವಗಳನ್ನು ಕೆರೆಯಿಂದ ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








