ಶಿವಮೊಗ್ಗ : ಯುವತಿಯೊಬ್ಬಳು ಮದುವೆ ಇನ್ನೂ 13 ದಿನ ಬಾಕಿ ಇರುವಾಗಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ. ಚೈತ್ರಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಫೆಬ್ರಲಿ 4ರಂದು ವಿವಾಹ ನಿಶ್ಚಯವಾಗಿತ್ತು. ಆದರೆ, ಏಕಾಏಕಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಎಂಕಾಂ ಓದಿದ್ದ ಯುವತಿ, ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್ನಲ್ಲಿ ಕೆಲಸ ಮಾಡುತ್ತಿದ್ದಳು. ನನಗೆ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ ನನಗೆ ಮದುವೆ ಬೇಡವೆಂದು ವಿರೋಧ ಮಾಡುತ್ತಿದ್ದಳು ಎನ್ನಲಾಗಿದೆ. ಮನೆಯವರು ಮನವೊಲಿಸಿದ್ದಕ್ಕೆ ಮದುವೆಗೆ ಒಪ್ಪಿದ್ದಳು ಎನ್ನಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.