ವಿಜಯಪುರ: ರೇಂಜರ್ ಸ್ವಿಂಗ್ ನಿಂದ ಬಿದ್ದ ಪರಿಣಾಮ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನವಭಾಗ್ ರಸ್ತೆಯ ಫಿಶ್ ಟನಲ್ ಎಕ್ಸ್ಪೋದಲ್ಲಿ ನಡೆದಿದೆ.
ಮೃತ ಯುವತಿಯನ್ನು ನಿಖಿತಾ ಎಂದು ಗುರುತಿಸಲಾಗಿದೆ. ಅ.20ರಂದು ಫಿಶ್ ಟನಲ್ ಎಕ್ಸ್ಪೋದಲ್ಲಿರುವ ರೇಂಜರ್ ಸ್ವಿಂಗ್ನಲ್ಲಿ ನಿಖಿತಾ ಕುಳಿತಿದ್ದರು. ಮೂವರು ಯುವತಿಯರು ಒಟ್ಟಿಗೆ ಕುಳಿತಿದ್ದು, ನಿಖಿತಾ ಅವರಿಗೆ ಸೊಂಟಕ್ಕೆ ಕಟ್ಟಿದ್ದ ಬೆಲ್ಟ್ ಕಟ್ಟಾಗಿ ಕೆಳಗೆ ಬಿದ್ದಿದ್ದಾರೆ. ತಲೆ ಕೆಳಗಾಗಿ ಬಿದ್ದ ಪರಿಣಾಮ ತ್ರೀವವಾಗಿ ಗಾಯಗೊಂಡಿದ್ದರು. ಕೂಡಲೇ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ವಿಡಿಯೋ ಪೋಷಕರ ಮೊಬೈಲ್ನಲ್ಲಿ ಸೆರೆಯಾಗಿದ್ದು, ತಲೆ ಕೆಳಗಾಗಿ ಬಿದ್ದಿರುವುದು ತಿಳಿದು ಬಂದಿದೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ (Gandhi Chowk Police Station) ಪ್ರಕರಣ ದಾಖಲಾಗಿದೆ.








