ರಕ್ತಸ್ರಾವದಿಂದ ನರಳುತ್ತಿದ್ದ ಸ್ಥಿತಿಯಲ್ಲಿ ಸಿಕ್ಕ ಯುವತಿ

1 min read
Rape on Child Saaksha tv

ರಕ್ತಸ್ರಾವದಿಂದ ನರಳುತ್ತಿದ್ದ ಸ್ಥಿತಿಯಲ್ಲಿ ಸಿಕ್ಕ ಯುವತಿ

ರಾಜಸ್ಥಾನ: ಅಪ್ರಾಪ್ತೆ ಯುವತಿಯೊಬ್ಬಳು ರಕ್ತ ಸ್ರಾವದಿಂದ ಮೇಲ್ ಸೇತುವೆ ಮೇಲೆ ನರಳುತ್ತಿರುವ ಸ್ಥಿತಿಯಲ್ಲಿ ಸಿಕ್ಕಿದ್ದಾಳೆ. ಘಟನೆಯು  ತಿಜಾರಾ ಮೇಲ್ ಸೇತುವೆಯಲ್ಲಿ ನಡೆದಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿಯ ಮೇಲೆ ಅತ್ಯಾಚಾರವೆಸಗಿ ಆರೋಪಿಗಳು ಆಕೆಯನ್ನು ಮೇಲ್ಸೇತುವೆ ಮೇಲೆ ಎಸೆದು ಹೋಗಿರಬಹುದು ಎಂದು ಶಂಕಿಸಿದ್ದಾರೆ. ಸದ್ಯ ಆಕೆಗೆ ಜಿಲ್ಲಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ರಾಜಸ್ಥಾನದ ಅಲ್ವಾರ್ ನಿಂದ ಬೆಳಕಿಗೆ ಬಂದಿದ್ದು, ಮತ್ತೊಮ್ಮೆ ಮಾನವೀಯತೆ ತಲೆತಗ್ಗಿಸುವಂತೆ ಮಾಡಿದೆ. ತಡರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಅಪ್ರಾಪ್ತೆಯ ಖಾಸಗಿ ಭಾಗದಲ್ಲಿ ರಕ್ತ ಸುರಿಯುತ್ತಿತ್ತು. ಚಿಂತಾಜನಕ ಸ್ಥಿತಿಯಲ್ಲಿದ್ದ ಅಪ್ರಾಪ್ತೆಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ತಡರಾತ್ರಿಯವರೆಗೂ ಆರೋಪಿಗಳ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ 9 ಗಂಟೆ ಸುಮಾರಿಗೆ ತಿಜಾರಾ ಮೇಲ್ಸೇತುವೆ ಮೇಲೆ ಯಾರೋ ಅಪ್ರಾಪ್ತ ಬಾಲಕಿಯನ್ನು ಎಸೆದಿರುವ ಮಾಹಿತಿ ಲಭಿಸಿರು ಮೇರೆಗೆ ಪೊಲೀಸರು ಸ್ಥಳಕ್ಕೆ ತಲುಪಿದಾಗ ಬಾಲಕಿಯ ಖಾಸಗಿ ಭಾಗದಲ್ಲಿ ರಕ್ತಸ್ರಾವವಾಗಿದ್ದು, ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಾಲಕಿ ಮಾನಸಿಕ ಅಸ್ವಸ್ಥಳಾಗಿದ್ದಾಳೆ. ಅವರ ಕುಟುಂಬ ಸದಸ್ಯರ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ ಎಂದು ಎಸ್ಪಿ ತೇಜಸ್ವನಿ ಗೌತಮ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd