ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಯುವತಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ನಗರದ ಡಬಲ್ ರೋಡ್ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಅರ್ಧ ನಿರ್ಮಾಣ ಮಾಡಿ ಹಾಗೇ ಬಿಟ್ಟಿರುವ ಕಟ್ಟಡದಲ್ಲಿ ಶವಪತ್ತೆಯಾದ ಬಗ್ಗೆ ಮಾಹಿತಿ ಸಿಕ್ಕಿದ್ದು ಸ್ಥಳಕ್ಕೆ ಸಂಪಂಗಿರಾಮನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಮಾರು 25ರಿಂದ 26 ವಯಸ್ಸಿನ ಯುವತಿಯ ಮೃತದೇಹ ಎಂದು ಅಂದಾಜಿಸಲಾಗಿದೆ. ಸದ್ಯ ಯುವತಿಯ ಗುರುತು ಪತ್ತೆಯಾಗಿಲ್ಲ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.