ಮಂಗಳೂರು: ದಪ್ಪ ಇದ್ದೇನೆಂದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ನಗರದಲ್ಲಿನ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನೋರ್ವರು ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕೃತಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ ಎನ್ನಲಾಗಿದೆ.
ಅಲ್ಲದೇ, ಯುವತಿ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್ನೋಟ್ ಬರೆದಿಟ್ಟು, ಹಾಸ್ಟೆಲ್ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ದಪ್ಪ ಇದ್ದೀನಿ.. ನೋಡೋಕೆ ಚೆನ್ನಾಗಿ ಕಣ್ತಾ ಇಲ್ಲ. ಎಂಬಿಬಿಎಸ್ ಮುಗಿಸಬೇಕು ಅಂತಾ ತುಂಬಾ ಆಸೆ ಇತ್ತು. ಆದರೆ ನನ್ನ ಸೌಂದರ್ಯಕ್ಕೆ ದಪ್ಪ ಅಡ್ಡಿಯಾಗಿದೆ. ತೂಕ ಇಳಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಆಗಲಿಲ್ಲ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾಳೆ ಎನ್ನಲಾಗಿದೆ.
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.