ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆ ಬಿಮ್ಸ್‍ನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬರು ನರಳಿ ನರಳಿ ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.
ಕಾಗವಾಡ ತಾಲೂಕಿನ ಗ್ರಾಮವೊಂದರ 30 ವರ್ಷದ ಯುವತಿ ತೀವ್ರ ಮಧುಮೇಹದಿಂದ ಬಳಲುತ್ತಿದ್ದರು. ನನಗೆ ಶುಗರ್ ಐತ್ರಿ, ಚಿಕಿತ್ಸೆ ಕೊಡಿ ಎಂದು ಯುವತಿ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಅಂಗಲಾಚಿ ಬೇಡಿದ್ರೂ ಸರಿಯಾದ ಚಿಕಿತ್ಸೆ ನೀಡಿಲ್ಲ. ಹೀಗಾಗಿ ಆಕೆ ನರಳಿ ನರಳಿ ಮೃತಪಟ್ಟಿದ್ದಾಳೆ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ.
ಯುವತಿ ಸಾವಿಗೂ ಮುನ್ನ ನರಳಾಡಿದ ಘಳಿಗೆಯ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ. ಇದಕ್ಕೂ ಮೊದಲು ಯುವತಿಯನ್ನು ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದರೂ ಯಾರೂ ದಾಖಲಿಸಿಕೊಂಡಿಲ್ಲ ಎಂಬ ಆರೋಪವೂ ಇದೆ. ಕೊನೆಗೆ ಅನಿವಾರ್ಯವಾಗಿ ಬಿಮ್ಸ್ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಈ ವೇಳೆ ಕೋವಿಡ್ ಟೆಸ್ಟ್ ಮಾಡಿದಾಗ ಕೊರೊನಾ ದೃಢವಾಗಿತ್ತು. ಬಳಿಕ ಕೋವಿಡ್ ವಾರ್ಡ್‍ಗೆ ಯುವತಿಯನ್ನು ಶಿಫ್ಟ್ ಮಾಡಲಾಗಿತ್ತು.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಳಗಾವಿ ಜಿಲ್ಲಾಸ್ಪತ್ರೆ ಅಧೀಕ್ಷಕ ಡಾ.ವಿನಯ್ ದಾಸ್ತಿಕೊಪ್ಪ, ಯುವತಿ ಕೊರೊನಾದಿಂದ ಮೃತಪಟ್ಟಿಲ್ಲ. ಬೇರೆ ವಾರ್ಡ್‍ನಲ್ಲಿ ಯುವತಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದರಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...








