ಹುಬ್ಬಳ್ಳಿ: ಕುಟುಂಬಸ್ಥರ ವಿರೋಧದ ಮಧ್ಯೆ ಮದುವೆಯಾಗಿದ್ದ ಮಗಳನ್ನು ಮಾತುಕತೆಗೆಂದು ಕರೆಯಿಸಿ ಮರಳಿ ಕರೆದುಕೊಂಡು ಹೋಗಿರುವ ಘಟನೆ ನಡೆದಿದೆ.
ಯುವತಿಯು ತನಗಿಂತ ಚಿಕ್ಕ ವಯಸ್ಸಿನ ಯುವಕನೊಂದಿಗೆ ಮದುವೆಯಾಗಿ ಜೀವನ ನಡೆಸುತ್ತಿದ್ದಳು. ಅಲ್ಲದೇ, ಆಕೆ ಗರ್ಭಿಣಿ ಕೂಡ ಆಗಿದ್ದಳು ಎನ್ನಲಾಗಿದೆ. ಸದ್ಯ ಬಲವಂತವಾಗಿ ಪೋಷಕರು ಕರೆದುಕೊಂಡು ಹೋಗಿರುವ ಘಟನೆ ನಡೆದಿದೆ. ಈ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹರಿಹರ ತಾಲೂಕಿನ ಗುತ್ತೂರು ಮೂಲದ ಯುವತಿ ತನಗಿಂತ ಚಿಕ್ಕ ವಯಸ್ಸಿನ ಹುಬ್ಬಳ್ಳಿ ಮೂಲದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಈಗ ಗರ್ಭಿಣಿ ಕೂಡ ಆಗಿದ್ದಾಳೆ. ಶಿವಮೊಗ್ಗದಲ್ಲಿ ಮದುವೆಯಾಗಿ, ನಂತರ ಗೋವಾದಲ್ಲಿ ಇಬ್ಬರೂ ವಾಸಿಸುತ್ತಿದ್ದರು.
ಈ ಕುರಿತು ಯುವತಿಯ ಮನೆಯವರು ಹರಿಹರದಲ್ಲಿ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಮಾತುಕತೆಗೆ ಕರೆಯಿಸಿದ್ದರು. ಈ ಸಂದರ್ಭದಲ್ಲಿ ಯುವತಿಯ ಮೇಲೆ ಹಲ್ಲೆ ಮಾಡಿ ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.