ಬೆಂಗಳೂರು: ತಂಗಿಯೊಬ್ಬಳು ತನ್ನ ಅಕ್ಕನ ಮನೆಯಲ್ಲಿಯೇ ದೋಚಿ ಸಿಕ್ಕಿ ಹಾಕಿಕೊಂಡಿರುವ ಘಟನೆಯೊಂದು ನಡೆದಿದೆ.
ಸಿಲಿಕಾನ್ ಸಿಟಿಯ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ತಂಗಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಮಾ ಬಂಧಿತ ಆರೋಪಿ. ಆರೋಪಿಯು ತನ್ನ ಅಕ್ಕ ಮನೆಯಲ್ಲಿ ಇಲ್ಲದ ವೇಳೆ ಮನೆಗೆ ನುಗ್ಗಿ 52 ಲಕ್ಷ ರೂ. ನಗದು ಹಾಗೂ 180 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಯಿಂದ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂ. ಹಣ ವಶಕ್ಕೆ ಪಡೆಯಲಾಗಿದೆ.
ಆರೋಪಿಯ ಅಕ್ಕ ತನ್ನ ಸಂಬಂಧಿಕರ ಮನೆಯಲ್ಲಿ ಕೀ ಇಟ್ಟು ಊರಿಗೆ ಹೋಗಿದ್ದರು. ಆದರೆ, ರಾತ್ರಿ ವೇಳೆ ಅವರು ಮನೆ ನೋಡಲು ಬಂದ ವೇಳೆ ಈ ಘಟನೆ ಬಯಲಿಗೆ ಬಂದಿದೆ. ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು 6 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ.