Akasha chopra | ಪಶ್ಚಾತ್ತಾಪ ನಿಮ್ಮನ್ನು ಬಿಡದು : ಚೋಪ್ರಾ
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಈ ಬಗ್ಗೆ ಟೀಂ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್ ಮತ್ತು ವೀಕ್ಷಕ ವಿವರಣೆಗಾರ ಆಕಾಶ್ ಚೋಪ್ರಾ ಆಸಕ್ತಿದಾಯಕ ಕಮೆಂಟ್ ಗಳನ್ನು ಮಾಡಿದ್ದಾರೆ.
18 ಜನರ ತಂಡದಿಂದ ನಿರೀಕ್ಷಿತ ಫಲಿತಾಂಶ ತೆಗೆಯಲು ಹೇಗೆ ಸಾಧ್ಯ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಐವರು ವೇಗದ ಬೌಲರ್ ಗಳು, ನಾಲ್ವರು ಸ್ಪಿನ್ನರ್ ಗಳು ಉತ್ತಮ ಆಯ್ಕೆ.. ಅವರೆಲ್ಲರಿಗೂ ಅವಕಾಶ ನೀಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಟೀಂ ಇಂಡಿಯಾ ಮುಂದಿನ ತಿಂಗಳು (ಜೂನ್) ತವರು ನೆಲದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲಿದೆ. ಈ ಸರಣಿಗೆ 18 ಸದಸ್ಯರ ಭಾರತ ತಂಡವನ್ನು ಭಾನುವಾರ ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಉಪನಾಯಕ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.
IPL-2022 ರಲ್ಲಿನ ಆಟಗಾರರ ಪ್ರದರ್ಶನದ ಆಧಾರದ ಮೇಲೆ, ಉಮ್ರಾನ್ ಮಲಿಕ್ ಮತ್ತು ಅರ್ಶ್ದೀಪ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ಅವರಂತಹ ಹಿರಿಯರು ಪುನರಾಗಮನ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಬಗ್ಗೆ ಆಕಾಶ್ ಚೋಪ್ರಾ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಕೋವಿಡ್ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು 18 ಮಂದಿ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಐವರು ಫಾಸ್ಟ್ ಬೌಲರ್ ಗಳು, ನಾಲ್ವರು ಸ್ಪಿನ್ನರ್ ಗಳಿದ್ದಾರೆ.
ಇಷ್ಟು ದೊಡ್ಡ ತಂಡವನ್ನು ಸೆಲೆಕ್ಟ್ ಮಾಡಿದಾಗ ನೀವು ಪ್ರತಿಯೊಬ್ಬರಿಗೂ ಅವಕಾಶ ನೀಡಲು ಸಾಧ್ಯವೇ ಇಲ್ಲ. ಈ ವಿಷಯದಲ್ಲಿ ನೀವು ಖಂಡಿತವಾಗಿಯೂ ಪಶ್ಚತ್ತಾಪ ಪಡುತ್ತೀರಿ ಎಂದಿದ್ದಾರೆ ಆಕಾಶ್ ಚೋಪ್ರಾ.
ಅದೇ ರೀತಿ.. “ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ.. ಈ ಇಬ್ಬರು ಪ್ರಮುಖ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಡಿಕೆ ಹಲವಾರು ದಿನಗಳ ನಂತರ ಪುನರಾಗಮನಕ್ಕೆ ಸಿದ್ಧರಾಗಿದ್ದಾರೆ. ಆದರೆ, ಅವರಿಗೆ ಆಡುವ ಹನ್ನೊಂದರಲ್ಲಿ ಸ್ಥಾನ ಸಿಗುವ ರೀತಿ ಕಾಣಿಸುತ್ತಿಲ್ಲ ಎಂದಿದ್ದಾರೆ.
aakash-chopra-selectors-picking-18-member-squad-will-regret