ಬಾಲಿವುಡ್ ನ ಖ್ಯಾತ ನಟ ಆಮೀರ್ ಖಾನ್ ಅವರ ಪುತ್ರಿ ಇರಾ ಖಾನ್ (Ira Khan) ಮದುವೆ ಜನವರಿ 3ರಂದು ನಿರ್ಧಾರವಾಗಿದ್ದು, ಮದುವೆ ಶಾಸ್ತ್ರಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.
ಅಕ್ಟೋಬರ್ 3ರಂದು ಇರಾ ಮತ್ತು ನೂಪುರ್ ಶಿಖಾರೆ ಹೊಸ ಬದುಕಿಗೆ ಕಾಲಿಡಲಿದ್ದಾರೆ ಎಂದು ಸ್ವತಃ ಆಮೀರ್ ಖಾನ್ ಹೇಳಿಕೊಂಡಿದ್ದರು. ಸದ್ಯ ಈ ಹೇಳಿಕೆಯಂತೆ ಜನವರಿ 3ಕ್ಕೆ ಅವರಿಬ್ಬರ ಮದುವೆ ನಿರ್ಧಾರವಾಗಿದೆ.
ಕಳೆದ ವರ್ಷ ನವೆಂಬರ್ ನಲ್ಲಿ ನಿಶ್ಚಿತಾರ್ಥ (Engaged) ನಡೆದಿದ್ದು, ಇಬ್ಬರೂ ಉಂಗುರ ತೊಡಿಸಿ, ಮುತ್ತಿಡುವ ಮೂಲಕ ಎಂಗೇಜ ಆಗಿದ್ದರು. ಈಗ ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ. ರಿಜಿಸ್ಟರ್ ಮದುವೆಯ ನಂತರ ಉದಯಪುರದಲ್ಲಿ (Udaipur) ಸಂಪ್ರದಾಯಿಕವಾಗಿ ಈ ಜೋಡಿ ಸಪ್ತಪದಿ ತುಳಿಯಲಿದೆ. ಇವರ ಮದುವೆ ಕಾರ್ಯಕ್ರಮಗಳು ಮೂರು ದಿನಗಳ ಕಾಲ ನಡೆಯಲಿದೆ.