ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ ಜಯಭೇರಿ ಬಾರಿಸಿದ್ದು, ಅರವಿಂದ ಕೇಜ್ರಿವಾಲ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆಗಳು ನಡೆಯುತ್ತಿವೆ. ಮೂರನೇ ಬಾರಿಗೆ ದೆಹಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಕೇಜ್ರಿವಾಲ್ ಅವರ ಈ ಸಮಾರಂಭಕ್ಕೆ ವಿಶೇಷ ಅತಿಥಿಯೊಬ್ಬರಿಗೆ ಆಮ್ ಆದ್ಮಿ ಪಾರ್ಟಿ ಆಹ್ವಾನ ನೀಡಿದೆ. ಚುನಾವಣಾ ಫಲಿತಾಂಶದ ವೇಳೆ ದೇಶದ ಗಮನ ಸೆಳೆದಿದ್ದ ಬೇಬಿ ಮಫ್ಲರ್ ಮ್ಯಾನ್ ಗೆ ಅರವಿಂದ ಕೇಜ್ರಿವಾಲ್ ಅವರ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.
ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಭಾನುವಾರ ಬೆಳಗ್ಗೆ 10 ಗಂಟೆಗೆ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೇಬಿ ಮಫ್ಲರ್ ಮ್ಯಾನ್ ವಿಶೇಷ ಅತಿಥಿಯಾಗಿ ಕಾಣಿಸಲಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ಘೋಷಿಸಿದೆ.








