ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್ ಹೀರೋ ಅಭಿನಂದನ್ ರಿಗೆ ಗ್ರೂಪ್ ಕ್ಯಾಪ್ಟನ್ ಆಗಿ ಬಡ್ತಿ
ನವದೆಹಲಿ : ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಬಲಿದಾನಕ್ಕೆ ಪ್ರತಿಯಾಗಿ ಸರ್ಜಿಕಲ್ ಸ್ಟ್ರೈಕ್ ಮೂಲಕ ಭಾರರತ ಸೇಡು ತೀರಿಸಿಕೊಂಡಿತ್ತು. ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಹತ್ಯೆಗೈದು ವಿಶ್ವದ ೆದುರು ಭಾರತದ ತಾಕತ್ತನ್ನ ತೋರಿಸಿತ್ತು. ಬಾಲಾಕೋಟ್ ನಲ್ಲಿ 300ಕ್ಕೂ ಹೆಚ್ಚು ಉಗ್ರರ ಅಡಗುತಾಣಗಳನ್ನ ಭಾರತೀಯ ವಾಯುಪಡೆ ಧ್ವಂಸ ಮಾಡಿತ್ತು. ಆಗ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಆಗಿ ಬಾಲಾಕೋಟ್ ವೈಮಾನಿಕ ದಾಳಿಯ ಹೀರೋ ಆಗಿ ಹೊರಹೊಮ್ಮಿದ್ದ ಅಭಿನಂದನ್ ವರ್ಧಮಾನ್ ಅವರಿಗೆ ಈಗ ಗ್ರೂಪ್ ಕ್ಯಾಪ್ಟನ್ ಆಗಿ ಬಡ್ತಿ ನೀಡಲಾಗಿದೆ ಎಂದು ವರದಿಯಾಗಿದೆ.
ಗ್ರೂಪ್ ಕ್ಯಾಪ್ಟನ್ ಹುದ್ದೆಯು ಭಾರತೀಯ ಸೇನೆಯ ಕರ್ನಲ್ ಹುದ್ದೆಗೆ ಸಮನಾಗಿದೆ ಎಂದು ವರದಿ ಉಲ್ಲೇಖಿಸಿದೆ. ಬಾಲಾಕೋಟ್ ಮೇಲೆ ನಡೆಸಲಾದ ವೈಮಾನಿಕ ದಾಳಿಯ ವೇಳೆ ವಿಂಗ್ ಕಮಾಂಡರ್ ಅಭಿನಂದನ್ ಅವರು ಪಾಕ್ ನ ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದರು. ಆದ್ರೆ ತಾವಿದ್ದ ವಿಮಾನ ಪತನಗೊಂಡು ಪಾಕಿಸ್ತಾನಕ್ಕೆ ಸೆರೆ ಸಿಕ್ಕಿದ್ದರು. ಭಾರತ ಸರ್ಕಾರ ಮತ್ತು ಅಂತರರಾಷ್ಟ್ರೀಯ ಸಮುದಾಯದ ತೀವ್ರ ಒತ್ತಡದ ನಂತರ ಅವರನ್ನು ಮಾರ್ಚ್ 1ರ ರಾತ್ರಿ ಪಾಕಿಸ್ತಾನ ಬಿಡುಗಡೆ ಮಾಡಿತ್ತು.