ಜನ ಬಯಸಿದರೆ ಚುನಾವಣೆಗೆ ಸ್ಪರ್ಧಿಸ್ತೀನಿ : ಅಭಿ
ಮಂಡ್ಯ : ಜನ ಬಯಸಿದ್ರೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ನಟ ಅಭಿಷೇಕ್ ಅಂಬರೀಶ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಳುಗನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಭವಿಷ್ಯದಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದು.
ಜನ ಬಯಸಿದರೆ ಖಂಡಿತ ನಾನು ರಾಜಕೀಯಕ್ಕೆ ಬರುತ್ತೇನೆ. ಮದ್ದೂರಿಗಾಗಲಿ, ಮಂಡ್ಯಗಾಗಲಿ ಜಿಲ್ಲೆಯಲ್ಲಿರುವ ಏಳು ಕ್ಷೇತ್ರಗಳಿಗೂ ಒಳ್ಳೆಯ ಎಂಎಲ್ ಎಗಳು ಸಿಗಬೇಕು ಎಂದು ಹೇಳಿದರು.
ಮುಂದುವರೆದು ಮಾತನಾಡಿದ ಅವರು, ಸಿಎಂ ಬದಲಾವಣೆಯಾಗುತ್ತಾರೆ ಎಂದು ಯಾರಿಗೂ ಗೊತ್ತಿರಲಿಲ್ಲ, ಯಾರಿಗಾದರೂ ಗೋತ್ತಿತ್ತಾ ಎಂದು ಕೇಳಿದ ಅಭಿ, ನೋಡಿ ಭವಿಷ್ಯದಲ್ಲಿ ಏನು ಬೇಕಾದರು ಆಗಬಹದು, ಜನ ಬಯಸಿದರೆ ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿದರು.