ಅಭಿ ರಾಜಕೀಯ ಪ್ರವೇಶ : ಸುಮಲತಾ ಹೇಳಿದ್ದೇನು..?
ಬೆಂಗಳೂರು : ಅಭಿಷೇಕ್‍ಗೆ ಈಗ 28 ವರ್ಷ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನಿಮಾ ಕಡೆ ಹೆಚ್ಚು ಗಮನಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೆ 20 ತಿಂಗಳು ಇದೆ. ಆಗ ನೋಡೋಣ ಏನಾಗಲಿದೆಯೋ ಅಭಿಮಾನಿಗಳಿಂದ ಒತ್ತಾಯ ಬಂದರೆ ನೋಡೋಣ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.
ಸಂಸದೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಅಭಿಷೇಕ್ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ ಅವರು, ಅಭಿಷೇಕ್‍ಗೆ ಈಗ 28 ವರ್ಷ, ಸಿನಿಮಾ ಕಡೆ ಹೆಚ್ಚು ಗಮನಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಗೆ 20 ತಿಂಗಳು ಇದೆ. ಆಗ ನೋಡೋಣ ಏನಾಗಲಿದೆಯೋ ಅಭಿಮಾನಿಗಳಿಂದ ಒತ್ತಾಯ ಬಂದರೆ ನೋಡೋಣ. ಸದ್ಯಕ್ಕಂತೂ ಸಿನಿಮಾಗಳ ಕಡೆ ಗಮನಹರಿಸಿದ್ದಾರೆ ಎಂದಿದ್ದಾರೆ.
ಇದೇ ವೇಳೆ ಗಣಿಗಾರಿಕೆ ಬಗ್ಗೆ ಮಾತನಾಡಿ, ಅಕ್ರಮ ಗಣಿಗಾರಿಕೆ ವಿಚಾರವಾಗಿ ಮೊದಲ ಹೆಜ್ಜೆ ಇಟ್ಟು ಆಗಿದೆ. ಕದ್ದು ಮುಚ್ಚಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಡೆದು ನಿಯಂತ್ರಣಕ್ಕೆ ತರುವ ಸಮಯವಾಗಿದೆ. ಓಪನ್ ಆಗಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಸ್ಥಗಿತವಾಗಿದೆ. ಊಹೆ ಮಾಡಿಕೊಂಡು ಇರುವವರಿಗೆ ನಾನು ಬಂದು ಉತ್ತರ ಕೊಡಲು ಸಾಧ್ಯವಿಲ್ಲ ಎಂದು ತಮ್ಮ ವಿರೋಧಿಗಳಿಗೆ ಟಾಂಗ್ ನೀಡಿದರು.