ಗದಗ: ಉತ್ತರ ಪ್ರದೇಶದ ಹಾತ್ರಾಸ್ನಲ್ಲಿ ದಲಿತ ಯುವತಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಗದಗನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗದಗ್ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.
ಮಹಿಳೆಯರನ್ನು ಪೂಜಿಸುವ ದೇಶದಲ್ಲಿ ಇಂತಹ ಕ್ರೂರ ಅತ್ಯಾಚಾರ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ. ಅತ್ಯಾಚಾರ ಮತ್ತು ಕಿರುಕುಳದಿಂದಾಗಿ ಯುವತಿಯು ಮೃತಪಟ್ಟಿದ್ದಾಳೆ. ಹೀಗಾಗಿ ನ್ಯಾಯಾಲಯ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಯಿತು.
ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ನಿಧನ
ಕರ್ನಾಟಕ ಚಿತ್ರರಂಗದ ಹಿರಿಯ ಹಾಸ್ಯನಟ ಸರಿಗಮ ವಿಜಿ ಅವರು ಇಂದು (ಜ. 16) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಮಣಿಪಾಲ್ ಹಾಸ್ಪಿಟಲ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ...